ಪುತ್ತೂರು, ಸೆ.1(DaijiworldNews/AA): ಅಗ್ನಿ ಅವಘಡ ಸಂಭವಿಸಿ ಹಾರ್ಡ್ವೇರ್ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಆಗಸ್ಟ್ 31 ರಂದು ಪುತ್ತೂರಿನ ಪುರುಷಕಟ್ಟೆಯಲ್ಲಿ ನಡೆದಿದೆ.
ಘಟನೆಯಲ್ಲಿ ಹಾರ್ಡ್ವೇರ್ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಅಥವಾ ಬೇರೆ ಯಾವ ಕಾರಣವಿರಬಹುದೆಂದು ತನಿಖೆ ನಡೆಸಲಾಗುತ್ತಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಘಟನಾ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿ ಅವಘಡದಿಂದಾಗಿ ಅಂಗಡಿಗೆ ಭಾರೀ ಹಾನಿಯಾಗಿದ್ದು, ಅಪಾರ ನಷ್ಟ ಸಂಭವಿಸಿದೆ.