ಪುತ್ತೂರು, ಸೆ.2(DaijiworldNews/AA): ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆ ನೀಡಿದ ದೂರಿನ ಅನುಸಾರ, "ನಾನು ಅರುಣ್ ಕುಮಾರ್ ಪುತ್ತಿಲ ಅವರ ಹಿಂದುತ್ವ ಸಿದ್ಧಾಂತದಿAದ ಪ್ರಭಾವಿತನಾಗಿದ್ದೆ ಮತ್ತು ಅವರ ಅಭಿಮಾನಿಯಾಗಿದ್ದೇನೆ. ನಾನು ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಬೆಂಬಲ ನೀಡುತ್ತಿದ್ದೆ. 2023ರ ಜೂನ್ ನಲ್ಲಿ ಬೆಂಗಳೂರಿನ ಹೋಟೆಲ್ಗೆ ಬರುವಂತೆ ಹೇಳಿ ಲೈಂಗಿಕ ದೌರ್ಜನ್ಯ ನಡೆದಿದೆ. ದೌರ್ಜನ್ಯದ ಫೋಟೋ, ಸೆಲ್ಫಿ ವೀಡಿಯೋ ಮಾಡಿ ಬ್ಲಾಕ್ಮೇಲ್ ಮಾಡಿದ್ದಾರೆಂದು ಸಹ ಆರೋಪ ಮಾಡಿದ್ದಾರೆ. ಮಹಿಳೆ ನೀಡಿದ ದೂರಿನ ಅನುಸಾರ ಐಪಿಸಿ ಸೆಕ್ಷನ್ 417, 354ಎ, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
2024ರ ಲೋಕಸಭಾ ಚುನಾವಣೆಯ ನಂತರ ನನ್ನೊಂದಿಗೆ ಮಾತುಕತೆ ಕಡಿಮೆಗೊಳಿಸಿದ್ದರು. ನನ್ನನ್ನು ಸಂಪೂರ್ಣವಾಗಿ ಶೋಷಣೆಗೆ ಒಳಪಡಿಸಿ ಅವರ ಆಸೆ ತೀರಿಸಿಕೊಂಡು ನನ್ನನ್ನು ದೂರ ಮಾಡಿದ್ದಾರೆ. ಆ ಭಯದಿಂದ ನನ್ನ ನಿವಾಸವನ್ನು ಪುತ್ತೂರಿಗೆ ಸ್ಥಳಾಂತರಿಸಿ ಬಾಡಿಗೆ ಮನೆಯಲ್ಲಿ ನನ್ನ ಮಗಳೊಂದಿಗೆ ಉದ್ಯೋಗ ಹಾಗೂ ವರಮಾನವಿಲ್ಲದೇ ಕಷ್ಟಪಡುತ್ತಿದ್ದೇನೆ. ನನಗೆ ಮತ್ತು ನನ್ನ ಮಗಳಿಗೆ ಪುತ್ತಿಲರು ಮಾಡಿದ ದ್ರೋಹ, ಅನ್ಯಾಯ, ಅಕ್ರಮ ವಿಶ್ವಾಸ ದ್ರೋಹಕ್ಕೆ ಕಾನೂನು ಕ್ರಮ ಕೈಗೊಂಡು ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.