ಪುತ್ತೂರು, ಮೇ26(Daijiworld News/SS): ಗುಂಪೊಂದು ಯುವಕನೊಬ್ಬನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಬ್ಬಿಣದ ರಾಡ್ನಿಂದ ಹೊಡೆದು ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ಗುಂಪಕಲ್ಲು ನಿವಾಸಿ ಮಹಮ್ಮದ್ ಸಾದಿಕ್ (21) ಹಲ್ಲೆಗೊಳಗಾದವರು.
ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ಅಂಬೇಡ್ಕರ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಯುವಕನೊಬ್ಬನನ್ನು ತಂಡವೊಂದು ತಡೆದು ನಿಲ್ಲಿಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಬ್ಬಿಣದ ರಾಡ್ನಿಂದ ಹೊಡೆದು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾರೆ. ಮಾತ್ರವಲ್ಲ, ಇದನ್ನು ತಡೆಯಲು ಬಂದ ವ್ಯಕ್ತಿಯೊಬ್ಬರ ಮೇಲೂ ತಂಡ ಹಲ್ಲೆ ನಡೆಸಿದೆ.
ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.