ಬಂಟ್ವಾಳ, ಸೆ.4(DaijiworldNews/AA): ಗ್ಯಾಸ್ ಸಿಲಿಂಡರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಶಿಕ್ಷೆಗೊಪಟ್ಟು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೋಟೆರ್ಕಾ ನಿವಾಸಿ ಶರೀಫ್ ಸಿ.ಅಬ್ಟಾಸ್ ಬಂಧಿತ ಆರೋಪಿ.
ಆರೋಪಿ ಶರೀಫ್ ಸಿ.ಅಬ್ಟಾಸ್ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ವೇಳೆ ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಆರೋಪಿಯು ಸುಮಾರು 22 ವರ್ಷಗಳ ಹಿಂದೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ, ಬಿ.ಸಿ.ರೋಡಿನ ಗ್ಯಾಸ್ ಏಜನ್ಸಿಯೊಂದರಿಂದ ಗ್ಯಾಸ್ ಸಿಲಿಂಡರ್ ಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ಭಾಗಿಯಾಗಿ ಆತನಿಗೆ ಶಿಕ್ಷೆ ವಿಧಿಸಲಾಗಿತ್ತು. ಬಳಿಕ ಆರೋಪಿಯು ಕಳೆದ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಆರೋಪಿ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಮಂಗಳೂರಿನ ಬೈಕಂಪಾಡಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ತಪದ್ಮನಾಭ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ರಾಮಕೃಷ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿ ಗಣೇಶ, ರಾಜೇಶ್ ಹಾಗೂ ಇರ್ಷಾದ್ ಅವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.