ಕುಂದಾಪುರ,ಸೆ.05 (DaijiworldNews/AK): ಕರ್ನಾಟಕ ಸರ್ಕಾರದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ವೀಕ್ಷಣಾಧಿಕಾರಿ ಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ನಡೆದಿದೆ .
ಆತ್ಮಹತ್ಯೆ ಮಾಡಿಕೊಂಡ ಆರೋಗ್ಯ ವೀಕ್ಷಣಾಧಿಕಾರಿಯನ್ನು ಶಿವಮೊಗ್ಗ ಮೂಲದ ಪ್ರಶಾಂತ್ (37) ಎಂದು ಗುರುತಿಸಲಾಗಿದೆ.ಶಿವಮೊಗ್ಗ ಮೊಲದ ಪ್ರಶಾಂತ್ ವಿವಾಹಿತನಾಗಿದ್ದು ಒಂದು ಪುಟ್ಟ ಮಗುವಿದೆ. ಈತನಿಗೆ ಕುಡಿತದ ಚಟವಿತ್ತು ಎನ್ನಲಾಗಿದೆ. ಕುಂದಾಪುರ ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ. ಬಳಿಕ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಯಾಗಿದ್ದ ಎಂದು ತಿಳಿದುಬಂದಿದೆ. ಮಾನಸಿಕವಾಗಿ ನೊಂದಿದ್ದು ತನ್ನ ಸ್ನೇಹಿತರ ಜೊತೆಗೆ ಜೀವನದಲ್ಲಿ ಜಿಗುಪ್ಸೆ ಉಂಟಾಗಿದೆ ಎಂದು ಆಗಾಗ ಹೇಳಿಕೊಳ್ಳುತ್ತಿದ್ದ ಎನ್ನಲಾಗಿದೆ. ಸ್ನೇಹಿತರು ಆತನಿಗೆ ಬುದ್ಧಿ ಹೇಳಿ ಸಮಾಧಾನಿಸುತ್ತಿದ್ದರು.
ಆದರೆ ಗುರುವಾರ ಕುಂದಾಪುರದ ಖಾಸಗಿ ಲಾಡ್ಜ್ ನಲ್ಲಿ ರೂಮ್ ಪಡೆದಿದ್ದು, ಮಲಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ ಆತ ಯಾವುದೋ ವಿಷ ಪದಾರ್ಥ ಸೇವಿಸಿರಬಹುದು ಎಂದು ಅಂದಾಜಿಸಲಾಗಿದೆ. ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821