ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಿಥುನ್ ರೈ, ಜಿಲ್ಲೆಯಲ್ಲಿ ಕೋಮು ಸಂಘರ್ಷ ಉಂಟು ಮಾಡುವ ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಯಲಿದೆ. ಮಿಥುನ್ ರೈ ತಲೆ ತೆಗೆಯುವುದರಿಂದ ಜಿಲ್ಲೆಯಲ್ಲಿ ಶಾಂತಿ, ಕೋಮು ಸಂಘರ್ಷ ನಿಲ್ಲುತ್ತದೆ ಎಂದಾದರೆ ನನ್ನ ತಲೆ ತೆಗೆಯಲಿ ಎಂದು ಹೇಳಿದ್ದಾರೆ.
ನನ್ನ ದೇಹ ತ್ಯಾಗ ಮಾಡುವುದಕ್ಕೂ ನಾನು ಸಿದ್ಧನಿದ್ದೇನೆ. ನಾನು ಎಲ್ಲಿಯೂ ಹೆದರಿ ಓಡಿ ಹೋಗಲ್ಲ. ನಾನು ಕಾಂಗ್ರೆಸ್ ಕಚೇರಿ ಎದುರಿನಲ್ಲಿಯೇ ಇರುತ್ತೇನೆ, ಬನ್ನಿ ಎಂದು ಸವಾಲು ಹಾಕಿದ್ದಾರೆ.
ನನ್ನ ತಲೆ ತೆಗೆಯುವುದಾದರೆ ಕಾಂಗ್ರೆಸ್ ಕಚೇರಿ ಎದುರು ಇರುತ್ತೇನೆ ಬನ್ನಿ. ನನ್ನ ವಿಳಾಸ ಕಾಂಗ್ರೆಸ್ ಕಚೇರಿ. ಜಿಲ್ಲೆಯಲ್ಲಿ ಕೋಮು ದ್ವೇಷ ಉಂಟು ಮಾಡುವ ಸಂಘಟನೆ ವಿರುದ್ಧ ನನ್ನ ಹೋರಾಟ ನಿರಂತರ ನಡೆಯಲಿದೆ ಎಂದು ತಿಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿ ಎಲ್ಲ ತಾಲ್ಲೂಕುಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೂರು ದಾಖಲು ಮಾಡಲಿದ್ದಾರೆ. ಈ ಬಗ್ಗೆ ನಾನು ಕೂಡಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರು ಸಲ್ಲಿಸಲಿದ್ದೇನೆ ಎಂದು ಮಿಥುನ್ ರೈ ಹೇಳಿದ್ದಾರೆ.