ಉಡುಪಿ, ಮೇ 27(Daijiworld News/SM): ಕರಾವಳಿ ಮೀನುಗಾರಿಕೆ ಕಾಯ್ದೆಯನ್ವಯ ಮೀನುಗಳ ಸಂತಾನೋತ್ಪತಿ ಸಮಯದಲ್ಲಿ ಉಡುಪಿ ಜಿಲ್ಲೆಯ ಕರಾವಳಿಯಲ್ಲಿ ಎಲ್ಲಾ ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1ರಿಂದ ನಿಷೇಧಿಸಲಾಗಿದೆ. ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಕಾಲ ಮೀನುಗಾರಿಕೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕರು ಈ ಆದೇಶ ಹೊರಡಿಸಿದ್ದಾರೆ. ಒಂದೊಮ್ಮೆ ಮೀನುಗಾರರು ಆದೇಶವನ್ನು ಉಲ್ಲಂಘಿಸಿ ಮೀನುಗಾರಿಕೆ ನಡೆಸಿದ್ದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲು ನಿರ್ಧರಿಸಲಾಗಿದೆ. ಮೀನುಗಾರಿಕೆಗೆ ಒದಗಿಸುವಂತಹ ಡೀಸೆಲ್ ಮೇಲಿನ ಸಹಾಯಧನವನ್ನು 1 ವರ್ಷದ ಅವಧಿಗೆ ರದ್ದುಗೊಳಿಸಲು ನಿರ್ಧರಿಸಲಾಗಿದೆ.
ಎಲ್ಲಾ ಮೀನುಗಾರರು ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಉಡುಪಿ ಜಿಲ್ಲಾ ಮೀನುಗಾರಿಕಾ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.