ಉಡುಪಿ, ಸೆ.17(DaijiworldNews/AA): ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಉಡುಪಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿಯ ರಾಜ್ಯ ಮಹಿಳಾ ನಿಲಯಕ್ಕೆ ಅಗತ್ಯ ವಸ್ತುಗಳನ್ನು ಕೊಡುಗೆಯಾಗಿ ನೀಡಲಾಯಿತು.
ಸಮಾರಂಭವನ್ನು ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಜೊತೆಗೆ ತಮ್ಮ ಪೋಷಕರ ಸ್ಮರಣಾರ್ಥವಾಗಿ ಮಹಿಳಾ ಆಶ್ರಮಕ್ಕೆ ವಾಶಿಂಗ್ ಮೆಷಿನ್ ಅನ್ನು ನೀಡಿದರು.
ಪ್ರಧಾನಮಂತ್ರಿ ಮೋದಿಯವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸುವ ಮೂಲಕ ಮೂಡುಸೂರಿನ ಅಂಗನವಾಡಿ ಕೇಂದ್ರ ಹಾಗೂ ಸರ್ಕಾರ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಿಹಿ ವಿತರಿಸಿ ಸಂಭ್ರಮಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ ಶೆಟ್ಟಿ, ಉಪಾಧ್ಯಕ್ಷೆ ದಯಾಶಿನಿ, ಜಿಲ್ಲಾ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ, ನಗರಸಭೆ ಸದಸ್ಯೆ ಭಾರತಿ ಪ್ರಶಾಂತ್, ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸರೋಜಾ ಶೆಣೈ, ಕಾರ್ಯದರ್ಶಿ ಶಾಂತಿ ಮನೋಜ್, ಮುಖಂಡರಾದ ಮಾಯಾ ಕಾಮತ್, ಸುಜಲಾ ಸತೀಶ್, ಸುಧಾ ಪೈ, ಪೂರ್ಣಿಮಾ ರತ್ನಾಕರ್, ಸುಮಾ ನಾಯ್ಕ್, ದೀಪಾ ಪೈ, ಪ್ರೀತಿ, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮೋರ್ಚಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.