ಪುತ್ತೂರು, ಮೇ31(Daijiworld News/SS): ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಎಂಬ ಹೆಸರಿನ ಬಸವ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಮೇ.30ರ ರಾತ್ರಿ ನಂದಿ (18) ಹೃದಯಾಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದೆ.
ಸದಾ ಆರೋಗ್ಯದಿಂದಿದ್ದ ನಂದಿ ದಿನ ನಿತ್ಯದಂತೆ ಮೇ30ರ ಮಧ್ಯಾಹ್ನ ಪೂಜೆ ವೇಳೆ ದೇವಸ್ಥಾನದ ಮುಂಭಾಗ ಬಂದು ದೇವರ ಪೂಜೆ ವೀಕ್ಷಿಸಿತ್ತು. ಆದರೆ ರಾತ್ರಿ 7.45 ರ ವೇಳೆಗೆ ನಂದಿ ಇದ್ದಕ್ಕಿದ್ದಂತೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
ಎಲ್ಲರಿಗೂ ಪ್ರೀತಿ ಪಾತ್ರವಾಗಿದ್ದ ಬಸವನ ಸಾವಿಗೆ ಭಕ್ತರು ಕಂಬನಿ ಮಿಡಿದಿದ್ದಾರೆ.