ಕಾಸರಗೋಡು, ಸೆ.26(DaijiworldNews/AK): ಉದುಮ ಮಾಜಿ ಶಾಸಕ ಕೆ.ಪಿ ಕು೦ಞಕಣ್ಣನ್ ಗುರುವಾರ ಬೆಳಿಗ್ಗೆ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರಿಗೆ 75 ವರ್ಷ ವಯಸ್ಸಾಗಿತ್ತು. ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಸೆ. 4ರಂದು ರಾಷ್ಟ್ರೀಯ ಹೆದ್ದಾರಿಯ ನೀಲೇಶ್ವರ ಕರುವೆಚ್ಚರಿ ಪೆಟ್ರೋಲ್ ಪಂಪ್ ಸಮೀಪದ ಕುಂಞಕಣ್ಣನ್ ಸಂಚರಿಸುತ್ತಿದ್ದ ಕಾರು ಲಾರಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದಾಗ ಡಿವೈಡರ್ ಗೆ ಬಡಿದು ಆಪಘಾತ ನಡೆದಿತ್ತು.
ಕಾಞ೦ಗಾಡ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪಯ್ಯನ್ನೂರಿನಲ್ಲಿರುವ ಮನೆಗೆ ತೆರಳುತ್ತಿದ್ದಾಗ ಅಪಘಾತ ನಡೆದಿತ್ತು . 1987 ರಲ್ಲಿ ಉದುಮ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಸರಗೋಡು ಜಿಲ್ಲೆ ರಚನೆಯಾದ ಬಳಿಕ ಮೊದಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಹಲವು ವರ್ಷಗಳ ಕಾಲ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು .
ಕಡನ್ನಪಳ್ಳಿ ಸಹಕಾರಿ ಬ್ಯಾಂಕ್ ಅಧ್ಯಕ್ಷ , ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ , ಪಯ್ಯನ್ನೂರು ಕಾಲೇಜು ಆಡಳಿತ ಸಮಿತಿ ಅಧ್ಯಕ್ಷ ಕೆರಾಫೆಡ್ ನಿರ್ದೇಶಕ , ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಪತ್ನಿ ,ಇಬ್ಬರು ಮಕ್ಕಳು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.