ಮಂಗಳೂರು, ಸೆ.26(DaijiworldNews/TA):ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಜನರಲ್ಲಿ ಶುಚಿತ್ವದ ಕುರಿತಾಗಿ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ.ಈ ನೈರ್ಮಲ್ಯ ಕಾರ್ಯಕ್ರಮಕ್ಕೆ ಇಬ್ಬರು ಬ್ರ್ಯಾಂಡ್ ಅಂಬಾಸಿಡರ್ಗಳಾಗಿ ಯಕ್ಷಗಾನದ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಮತ್ತು ದೈಜಿವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ಅವರನ್ನು ನೇಮಕ ಮಾಡಲಾಗಿದೆ.
ಗ್ರಾಮೀಣ ಜನರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದು, ಇಲಾಖೆ ಈ ಯೋಜನೆಯನ್ನು ಜಾರಿಗೆ ತಂದಿದೆ. ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆದೇಶದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಈ ಕಾರ್ಯಕ್ರಮ ಜರುಗುತ್ತಿದ್ದು, ದ.ಕ ಜಿಲ್ಲಾ ಪಂಚಾಯತ್ ವ್ಯಾಪ್ತಿಯ, ಗ್ರಾಮೀಣ ಜನರಲ್ಲಿ ಅರಿವು ಕಾರ್ಯಕ್ರಮ ಸ್ವಚ್ಛತೆ ಮತ್ತು ಶುಚಿತ್ವ ಅರಿವು ಮೂಡಿಸುವ ಪ್ರಮುಖ ಉದ್ದೇಶವನ್ನಿಟ್ಟು ಮಾಡಲಾಗುತ್ತಿರುವ ಈ ಕಾರ್ಯಕ್ರಮಕ್ಕೆ ಇಬ್ಬರು ರಾಯಭಾರಿಗಳು ನೇಮಕಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಿಂದ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಯಕ್ಷಗಾನದ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಮತ್ತು ದೈಜಿವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ಅವರನ್ನು ನೇಮಕ ಮಾಡಲಾಗಿದೆ.