ಉಡುಪಿ,ಸೆ.29(DaijiworldNews/TA):ರಾಷ್ಟ್ರೀಯ ಹೆದ್ದಾರಿ 66ರ ಉಡುಪಿಯ ಕಾಪು ಮಸೀದಿ ಜಂಕ್ಷನ್ ಬಳಿ ಕಾರು ಮತ್ತು ರಿಕ್ಷಾ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.
ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಕಾಪು ಪೇಟೆಯಿಂದ ಪೊಲಿಪು ಕಡೆಗೆ ತೆರಳುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ರಿಕ್ಷಾ ಚಾಲಕ ಪೂರ್ಣೇಶ್ ಮತ್ತು ಪ್ರಯಾಣಿಕ ನೂರ್ ಸಾಹೇಬ್ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ಹೆದ್ದಾರಿ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತ್ತು. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.