ಬೈಂದೂರು, ಸೆ.29(DaijiworldNews/AA): ಶಿವಮೊಗ್ಗ ಲೋಕಸಭಾ ಸಂಸದರಾದ ಬಿ ವೈ ರಾಘವೇಂದ್ರ ಇವರನ್ನು ಕೇಂದ್ರ ಸರ್ಕಾರವು ಎರಡು ಪ್ರಮುಖ ಸಂಸದೀಯ ಸಂಸ್ಥೆಗಳಿಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿಗೆ ಮತ್ತು ಗೃಹ ವ್ಯವಹಾರಗಳ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ(ಡಿಆರ್ಎಸ್ಸಿ) ನೇಮಕಗೊಳಿಸಿ ಆದೇಶ ಹೊರಡಿಸಿದೆ. ಈ ನೇಮಕಾತಿಗಳು ರಾಷ್ಟ್ರೀಯ ನೀತಿ ರಚನೆಯಲ್ಲಿ ಅವರಿಗೆ ಮಹತ್ವದ ಹೊಣೆ ವಹಿಸಲಾಗಿದೆ.
ಸಾರ್ವಜನಿಕ ಉದ್ಯಮಗಳ ಸಮಿತಿಯು ಸರ್ಕಾರಿ ಸ್ವಾಮ್ಯದ ಉದ್ಯಮಗಳ ನಿರ್ವಹಣೆ ಮತ್ತು ಕಾರ್ಯಕ್ಷಮತೆಯನ್ನು ಪರಿಶೀಲಿಸುತ್ತದೆ. ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯು ಆಂತರಿಕ ಭದ್ರತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಶೀಲಿಸುತ್ತದೆ.
ಈ ನೇಮಕ ಕುರಿತು ಸಂಸದರಾದ ಬಿ.ವೈ ರಾಘವೇಂದ್ರರವರು ಸಂಸತ ವ್ಯಕ್ತ ಪಡಿಸಿದ್ದು, ನರೇಂದ್ರ ಮೋದೀಜಿಯವರಿಗೆ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾರಿವರಿಗೆ ಕೃತಜ್ಞತೆಗಳನ್ನು ಸಲ್ಲಿಸಿರುತ್ತಾರೆ.