ಬ್ರಹ್ಮಾವರ, ಅ.08(DaijiworldNews/AA): ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯೋರ್ವರ ಅಂತ್ಯಕ್ರಿಯೆಯನ್ನು ಪೊಲೀಸರಿಗೆ ಮಾಹಿತಿ ನೀಡದೆ ನೆರವೇರಿಸಿದ ಕಾರಣ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುದಿ ಗ್ರಾಮದ ಬಿಯಾಳಿಯ ಸುಬ್ರಾಯ ನಾಯ್ಕ (66) ಸೆ. 27ರಂದು ಸೀತಾ ನದಿ ಸಮೀಪ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಾವು ಅಸ್ವಾಭಾವಿಕ ಆಗಿದ್ದರೂ ಪೊಲೀಸ್ ಠಾಣೆ ಅಥವಾ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡದೆ ಹಿರಿಯ ಪುತ್ರ ಸೀತಾರಾಮ ನಾಯ್ಕ ಅಂತ್ಯಕ್ರಿಯೆ ನೆರವೇರಿಸಿದ್ದರು.
ಹಿರಿಯ ಪುತ್ರ ಸೀತಾರಾಮ ನಾಯ್ಕ ಯಾರಿಗೂ ಮಾಹಿತಿ ನೀಡದೆ ದಹನ ಕ್ರಿಯೆ ನೆರವೇರಿಸಿದ ಹಿನ್ನೆಲೆ ಪ್ರಕರಣ ದಾಖಲಾಗಿದೆ. ಇನ್ನು ಸುಬ್ರಾಯ ನಾಯ್ಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.