ಸುಳ್ಯ, ಅ.13(DaijiworldNews/AA): ರಬ್ಬರ್ ಆಸಿಡ್ ಸೇವಿಸಿ ಅಸೌಖ್ಯಕ್ಕೊಳಗಾಗಿದ್ದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ.
ಮರ್ಕಂಜ ಗ್ರಾಮದ ಗೋಳಿಯಡ್ಕ ಶೇಷಪ್ಪ ಗೌಡ ಪಾಲ್ತಾಡು(70) ಮೃತ ದುರ್ದೈವಿ.
ಶೇಷಪ್ಪ ಗೌಡರು ನಾಲ್ಕು ದಿನಗಳ ಹಿಂದೆ ರಬ್ಬರ್ ಆಸಿಡ್ ಸೇವಿಸಿ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಬಳಿಕ ಅಲ್ಲಿಂದ ಸುಳ್ಯ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಅವರು ಮೃತಪಟ್ಟರೆಂದು ತಿಳಿದುಬಂದಿದೆ.