ಸುಳ್ಯ, ಅ.14(DaijiworldNews/AA): ಇಲ್ಲಿನ ತೊಡಿಕಾನ ಸರ್ವಿಸ್ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಇಂದು ವರದಿಯಾಗಿದೆ.
ಗುರು ಪ್ರಸಾದ್ ಕುಂಚಡ್ಕ(30) ಸಾವನ್ನಪ್ಪಿದ ಚಾಲಕ ಎಂದು ತಿಳಿದು ಬಂದಿದೆ.
ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.