ಮಂಗಳೂರು,ನ.06(DaijiworldNews/AK): ಇತ್ತೀಚಿನ ದನ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಸರಣಿ ಜಾನುವಾರುಗಳ ತನಿಖೆಯ ಭಾಗವಾಗಿ ಬಂಧಿಸಲಾಗಿದೆ.ಐಪಿಸಿ ಸೆಕ್ಷನ್ 379 ಮತ್ತು ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಸುಗ್ರೀವಾಜ್ಞೆ 2020 ರ ಅಡಿಯಲ್ಲಿ ಪ್ರಕರನ ದಾಖಲಿಸಲಾಗಿದೆ.
ಬಂಧಿತ ಆರೋಪಿಗಳನ್ನು ಮಂಗಳೂರು ಪೇಜಾವರ ಕೊಂಚಾರು ಕೊಳಂಬೆ ಬದ್ರಿಯಾನಗರ ನಿವಾಸಿ ಅಬ್ದುಲ್ ರಜಾಕ್ ಎಂಬವರ ಪುತ್ರ ಫೈಝಲ್ ಅಲಿಯಾಸ್ ಫೈಝಲ್ ಕೊಂಚಾರ್ (40) , ಮಂಗಳೂರು ಕೋಡಿ ಉಳ್ಳಾಲ ನಿವಾಸಿ ಅಬ್ದುಲ್ ರೆಹಮಾನ್ ಎಂಬವರ ಪುತ್ರ ಸುಹೈಬ್ ಅಖ್ತರ್ (24) ಎಂದು ಗುರುತಿಸಲಾಗಿದೆ.
ಕಳ್ಳತನಕ್ಕೆ ಬಳಸಿದ್ದ ರಿಡ್ಜ್ ಕಾರು ಮತ್ತು ಫ್ಯಾಸಿನೋ ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಬ್ಬರ ಬಂಧನದ ನಂತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ತನಿಖೆಯ ಸಂದರ್ಭದಲ್ಲಿ, ಫೈಝಲ್ ದನ ಕಳ್ಳತನ ಪ್ರಕರಣಗಳಲ್ಲಿ ಆತನ ವಿರುದ್ಧ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ಏಳು, ಉಡುಪಿಯ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಒಂದು ಮತ್ತು ಸಿರ್ಸಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ಸೇರಿವೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಫೈಝಲ್ ಸಂಪರ್ಕ ಹೊಂದಿದ್ದಾನೆ ಎಂದು ವರದಿಯಾಗಿದೆ.
ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ಧಾರ್ಥ್ ಗೋಯಲ್ ಐಪಿಎಸ್ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ದಿನೇಶ್ ಕುಮಾರ್ (ಅಪರಾಧ ಮತ್ತು ಸಂಚಾರ) ಅವರ ಮೇಲುಸ್ತುವಾರಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ತಂಡವು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಕೆ. ಕಾವೂರು ಠಾಣೆ ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು, ಸಬ್ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ ಬಿರಾದಾರ್, ಅಧಿಕಾರಿಗಳಾದ ಭುವನೇಶ್ವರಿ, ರಿಯಾಜ್, ಚಂದ್ರನಾಯಕ್, ನಾಗರಾಜ್ ಭೈರಗೊಂಡ, ರಾಜಪ್ಪ ಕಾಶಿಬಾಯಿ ಬಂಧಿತರಲ್ಲಿ ಪ್ರಮುಖರು.