ಮಂಗಳೂರು, ನ.09(DaijiworldNews/AA): ರೂಟ್ ಪರವಾನಿಗೆ ಹೊಂದಿರುವ ಖಾಸಗಿ ಬಸ್ವೊಂದು ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಿಂದ ಪ್ರಯಾಣಿಕರನ್ನು ಕರೆದೊಯ್ದು ನಿಯಮ ಉಲ್ಲಂಘಿಸಿರುವ ಹಿನ್ನೆಲೆ 5,000 ರೂ. ದಂಡ ವಿಧಿಸಲಾಗಿದೆ.
ಮುಂಬೈನಿಂದ ಆಗಮಿಸಿದ ರೈಲಿನಲ್ಲಿದ್ದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ನ್ನು ದಕ್ಷಿಣ ಕನ್ನಡ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ನ ಸದಸ್ಯರು ತೊಕ್ಕೊಟ್ಟಿನಲ್ಲಿ ತಡೆದು ನಿಲ್ಲಿಸಿ, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಸ್ಗೆ 5,000 ರೂ. ದಂಡ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ.
ನಗರದಲ್ಲಿ ಖಾಸಗಿ ವಾಹನಗಳು, ರೂಟ್ ಬಸ್ಗಳು ಬಾಡಿಗೆ ಮಾಡುತ್ತಿರುವುದರಿಂದ ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರಿಗೆ ಸಮಸ್ಯೆಯಾಗಿದ್ದು ಇಂತಹ ವಾಹನಗಳ ವಿರುದ್ಧ ಪೊಲೀಸರು ಹಾಗೂ ಆರ್ಟಿಒ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಅಸೋಸಿಯೇಷನ್ ಸದಸ್ಯರು ಆಗ್ರಹಿಸಿದ್ದಾರೆ.