ಕುಂದಾಪುರ, ನ.11(DaijiworldNews/TA):2023 - 24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವ ತಲ್ಲೂರು ಗ್ರಾಮ ಪಂಚಾಯತ್ ನ್ನು ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೋಟ ಕಾರಂತ ಥೀಂ ಪಾರ್ಕ್ನಲ್ಲಿ ನಡೆದ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕಾರಂತ ವಿಶೇಷ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ಮೇಘಾಲಯದ ರಾಜ್ಯಪಾಲ ಸಿ.ಎಚ್ ವಿಜಯಶಂಕರ್ ಪುರಸ್ಕಾರ ಪ್ರದಾನ ಮಾಡಿದರು.ಈ ಸಂದರ್ಭದಲ್ಲಿ ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗಿರೀಶ್ ಎಸ್. ನಾಯ್ಕ್, ಉಪಾಧ್ಯಕ್ಷೆ ಚಂದ್ರಮತಿ, ಪಂಚಾಯತ್ ಅಭಿವೃಧ್ಧಿ ಅಧಿಕಾರಿ ನಾಗರತ್ನ ಜಿ, ಕಾರ್ಯದರ್ಶಿ, ಗ್ರಾ.ಪಂ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸರಕಾರ ಗ್ರಾಮ ಪಂಚಾಯತ್ಗಳ ಉತ್ತಮ ಆಡಳಿತ ನಿರ್ವಹಣೆಯನ್ನು ಪರಿಶೀಲಿಸಿ ಪ್ರತೀ ವರ್ಷ ಉತ್ತಮ ಕಾರ್ಯನಿರ್ವಹಣೆ ತೋರಿದ ಪಂಚಾಯತ್ಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗುತ್ತಿದೆ.
ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗಿರೀಶ್ ಮಾತನಾಡಿ ತಲ್ಲೂರು ಗ್ರಾಮ ಪಂಚಾಯತ್ ಜನಪರಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ. ಆಡಳಿತ ನಿರ್ವಹಣೆಯಲ್ಲೂ ಕೂಡಾ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ. ಪಂಚಾಯತ್ನ ಕಾರ್ಯವೈಖರಿಯನ್ನು ಗಮನಿಸಿದ ಸರಕಾರ ಪ್ರತಿಷ್ಟಿತ ಗಾಂಧಿ ಗ್ರಾಮ ಪುರಸ್ಕಾರ ಆಯ್ಕೆ ಮಾಡಿದೆ. ಇದರಿಂದ ಪಂಚಾಯತ್ನ ಜವಬ್ದಾರಿ ಹೆಚ್ಚಿದೆ. ಇನ್ನೂ ಹೆಚ್ಚು ಕೆಲಸ ಮಾಡಲು ಪ್ರೇರಣೆಯಾಗಿದೆ ಎಂದರು,