ಮಂಗಳೂರು, ಜೂ 10 (Daijiworld News/SM): ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿರುವುದನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಯಾಣಿಕನನ್ನು ಬಂಧಿಸಲಾಗಿದೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕರಿಬ್ಬರು ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿದ್ದ. ಇದನ್ನು ಪತ್ತೆ ಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು, ಇಬ್ಬರು ಪ್ರಯಾಣಿಕರಿಂದ ಚಿನ್ನ ವಶಕ್ಕೆ ಪಡೆದಿದ್ದಾರೆ. ಒಳ ಉಡುಪಿನಲ್ಲಿಟ್ಟು ಸಾಗಿಸುತ್ತಿದ್ದ ಸುಮಾರು 24ಕ್ಯಾರೆಟ್ ನ 21.48ಲ.ರೂ ಮೌಲ್ಯದ ಚಿನ್ನ ಹಾಗೂ ಮೆಟಾಲ್ ಕವರ್ ಸುತ್ತಿ ತಂದಿದ್ದ 24 ಕ್ಯಾರೆಟ್ ನ 117.30 ಗ್ರಾಂ ತೂಕದ 3.98ಲ.ರೂ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.