ಮಂಗಳೂರು, ಜೂ11(DaijiworldNews/AZM): ನಗರದ ವೆನ್ಲಾಕ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ, ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ದಿಢೀರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ರೋಗಿಗಳು ಶಾಸಕರಲ್ಲಿ ಆಸ್ಪತ್ರೆಯಲ್ಲಿರುವ ಕುಂದುಕೊರತೆಗಳನ್ನು ಹೇಳಿಕೊಂಡರು. ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಮತ್ತು ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಕರೆದು ಬಡ, ಮಧ್ಯಮ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪ ಉಂಟಾಗಬಾರದೆಂದು ಶಾಸಕರು ತಾಕೀತು ಮಾಡಿದರು.
ಈ ವೇಳೆ ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ವಸಂತ ಜೆ ಪೂಜಾರಿ, ರಮೇಶ್ ಕಂಡೆಟ್ಟು, ಅನಿಲ್ ರಾವ್, ಚೇತಕ್ ಪೂಜಾರಿ, ಉಮಾನಾಥ ಶೆಟ್ಟಿಗಾರ್, ಮನೋಹರ್ ಕದ್ರಿ ಸಹಿತ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.