ಮಂಗಳೂರು, ಜೂನ್ 12 (Daijiworld News/MSP): ಗೋವಾ – ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ತೊಕ್ಕೊಟ್ಟು ಫ್ಲೈಓವರ್ (ಮೇಲ್ಸೇತುವೆ)ಯು ಜೂ.13 ರಂದು ಉದ್ಘಾಟನೆಗೊಳ್ಳಲಿದೆ. ಗುರುವಾರ ಬೆಳಿಗ್ಗೆ 9.00 ಗಂಟೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಮೇಲ್ಸೇತುವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಆರ್ಥಿಕ ಅಡಚಣೆಯಿಂದ ಕಳೆದ 9 ವರ್ಷಗಳಿಂದ ನಿಧಾನಗತಿಯಲ್ಲಿ ಯಲ್ಲಿ ಸಾಗಿತ್ತು. ಮೇಲ್ಸೇತುವೆ ನಿಧಾನಗತಿಯ ಕಾಮಗಾರಿಗಾಗಿ ಜನಕ್ರೋಶ ವ್ಯಕ್ತವಾಗಿತ್ತು. ಕೊನೆಗೆ ಸಂಸದರ ಶಿಫಾರಸ್ಸಿನ ಮೇರೆಗೆ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ನಡೆಸುವ ಸಂಸ್ಥೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಿದ್ದರು.
ತೊಕ್ಕೊಟ್ಟು ಮೇಲ್ಸೇತುವೆ ಹಾಗು ಪಂಪ್'ವೆಲ್ ಮೇಲ್ಸೇತುವೆ ಕಾಮಗಾರಿ ವಿಳಂಬ ವಿಚಾರ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಭಾರೀ ಚರ್ಚೆಗೂ ಕಾರಣವಾಗಿತ್ತು. ಕಾಮಗಾರಿಯ ವಿಳಂಬಕ್ಕೆ ಕಾರಣ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಎಂದು ಆರೋಪಿಸಲಾಗಿತ್ತು. ಇದೀಗ ತೊಕ್ಕೊಟ್ಟು ಫ್ಲೈಓವರ್ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿ ನಿಂತಿದೆ.