ಮಂಗಳೂರು, ಫೆ.06(DaijiworldNews/TA): ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್ಸ್ಟೇಬಲ್ ಪ್ರವೀಣ್ ನಾಯ್ಕಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಗುರುವಾರ ಜಾಮೀನು ನೀಡಿದ್ದಾರೆ.

ವ್ಯಕ್ತಿಯೊಬ್ಬರ ಸ್ಕೂಟರ್ನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆಗೊಳಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಠಾಣೆಯ ಇನ್ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್ಸ್ಟೇಬಲ್ ಪ್ರವೀಣ್ ನಾಯ್ಕ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಜ.೨೭ರಂದು ಬಂಧಿಸಿದ್ದರು. ಅದರಂತೆ ಆರೋಪಿಗಳು ನ್ಯಾಯಾಂಗ ಸೆರೆಯಲ್ಲಿದ್ದರು. ಆರೋಪಿಗಳ ಪರವಾಗಿ ನ್ಯಾಯವಾದಿಗಳಾದ ಅರುಣ್ ಬಂಗೇರಾ ಮತ್ತು ರಿಹಾನಾ ಪರ್ವೀನ್ ವಾದ ಮಂಡಿಸಿದ್ದರು.