ಉಡುಪಿ, ಫೆ.09 (DaijiworldNews/AA): ಕಥೊಲಿಕ ಧರ್ಮಪ್ರಾಂತ್ಯ ಉಡುಪಿ ಇದರ ಧರ್ಮಾಧ್ಯಕ್ಷರಾದ ಅತೀ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ 75ನೇ ವರ್ಷದ ಹುಟ್ಟುಹಬ್ಬ ಹಾಗೂ ಧರ್ಮಾಧ್ಯಕ್ಷ ದೀಕ್ಷೆಯ 25 ವರ್ಷಗಳ ಬೆಳ್ಳಿ ಹಬ್ಬದ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಗದ್ಗುರು ಪೋಪ್ ಫ್ರಾನ್ಸಿಸ್ ಅವರ ಭಾರತ ಮತ್ತು ನೇಪಾಳದ ರಾಯಭಾರಿ (ನುನ್ಸಿಯೋ) ಅತೀ ವಂ|ಡಾ|ಲಿಯೊಪೊಲ್ಡೊ ಗಿರೆಲ್ಲಿ ಭಾನುವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.



ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಪರವಾಗಿ ಕುಲಪತಿ ವಂ|ಡಾ|ರೋಶನ್ ಡಿಸೋಜಾ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಅವರು ನುನ್ಸಿಯೋ ಅವರನ್ನು ಸ್ವಾಗತಿಸಿದರು.
ಈ ವೇಳೆ ಧರ್ಮಪ್ರಾಂತ್ಯದ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಉಪಸ್ಥಿತರಿದ್ದರು