ಮಂಗಳೂರು, ಫೆ.09(DaijiworldNews/TA): ದೇಶದ ಜನತೆ ಭ್ರಷ್ಟಾಚಾರದ ವಿರುದ್ಧವಾಗಿದ್ದಾರೆ ಎಂಬುದಕ್ಕೆ ದೆಹಲಿ ಚುನಾವಣೆಯ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ದ.ಕ ಜಿಲ್ಲಾ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರ ಹವಾ ಇಂದಿಗೂ ಉಳಿದಿರುವುದಕ್ಕೆ ದೆಹಲಿ ಫಲಿತಾಂಶ ಸಾಕ್ಷಿ. ಭ್ರಷ್ಟಾಚಾರದ ವಿರುದ್ಧ ಆಡಳಿತ ತರುತ್ತೇನೆ ಎಂದು ದೆಹಲಿಯಲ್ಲಿ ಅಧಿಕಾರಕ್ಕೇರಿದ ಅರವಿಂದ್ ಕೇಜ್ರಿವಾಲ್ ಅವರು ಭ್ರಷ್ಟಾಚಾರದಿಂದ ಜೈಲುಸೇರಿ, ಒಬ್ಬ ಮುಖ್ಯಮಂತ್ರಿ ಮಾಡಬಾರದ್ದನ್ನೆಲ್ಲಾ ಮಾಡಿ, ಇಂದು ಅವರು ಕೂಡ ಸೋಲುಂಡಿದ್ದಾರೆ.
ಹಾಗಾಗಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿಗೆ ಜನತೆ ಅಭೂತಪೂರ್ವ ಜಯ ತಂದುಕೊಟ್ಟಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಜೊತೆಯಾಗಿ ಕೆಲಸ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ ಎಂದು ಅವರು ತಿಳಿಸಿದ್ದಾರೆ.