ಕುಂದಾಪುರ, ಫೆ.26(DaijiworldNews/TA): ನ್ಯಾಯ ಸಿಗುವ ತನಕ ಧರಣಿ ನಿಲ್ಲದು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಗಳು ಜ್ವಾವಬ್ಧಾರಿಯುತವಾಗಿ ವರ್ತಿಸದಿದ್ದರೆ ಏನಾಗಬಹುದು ಎಂಬುದಕ್ಕೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಒಂದು ಒಳ್ಳೆಯ ಉದಾಹರಣೆ ಎಂದು ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ , ಮಾಜಿ ವಿಧಾನಪರಿಷತ್ ಸಭಾಪತಿ ಕೆ. ಪ್ರತಾಪ ಚಂದ್ರ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬ ನೀತಿಯ ವಿರುದ್ಧ ಶನಿವಾರ ಸಕ್ಕರೆ ಕಾರ್ಖಾನೆಯ ಪ್ರವೇಶ ರಸ್ತೆಯ ಬಳಿ ಆರಂಭಗೊಂಡ 'ಅನ್ನದಾತರ ನ್ಯಾಯಾಗ್ರಹ' ಅನಿರ್ಧಿಷ್ಟಾವಧಿ ಆಹೋರಾತ್ರಿ ಧರಣಿಯಲ್ಲಿ ಭಾಗಿಯಾಗಿ ಮಾತನಾಡಿದರು.
ಚುನಾಯಿತ ಪ್ರತಿನಿಧಿಗಳೂ ಕಣ್ಮುಚ್ಚಿ ಕುಳಿತಿದ್ದಾರೆ. ಜಾಗೃತಿ ಮೂಡಿಸಬೇಕಾದ ಮಾಧ್ಯಮಗಳು ಸುಮ್ಮನಿದ್ದಾರೆ ಎನ್ನುವುದು ವ್ಯವಸ್ಥೆಯ ಜಡತ್ವಕ್ಕೆ ಹಿಡಿದ ಕನ್ನಡಿ ಎಂದರು. ಈ ಬಹುಕೋಟಿ ಹಗರಣದ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸದೇ ಇರುವುದು ನಾಡಿನ ರೈತರಿಗೆ ಬಗೆದ ದ್ರೋಹ. ರೈತರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.