ಉಡುಪಿ, ಜೂ 16 (Daijiworld News/SM): ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವುದರಿಂದ ಮಲ್ಪೆ ಬೀಚ್ ಗೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ಆದರೆ ಇದನ್ನು ಉಲ್ಲಂಘಿಸಿ ತೆರಳಿದ ಪ್ರವಾಸಿಗರಿಗೆ ಹೋಮ್ ಗಾರ್ಡ್ ಸಿಬ್ಬಂದಿಗಳು ಲಾಠಿ ಬೀಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.
ನಿಯಮ ಉಲ್ಲಂಘಿಸಿ ಸಮುದ್ರಕ್ಕೆ ಇಳಿದ ಪ್ರವಾಸಿಗರಿಗೆ ಪೊಲೀಸರು ಲಾಠಿಯಿಂದ ಹೊಡೆದಿರುವ ಬಗ್ಗೆ ಆರೋಪಿಲಾಗಿದ್ದು, ಈ ಕುರಿತು ಆಕ್ಷೇಪ ವ್ಯಕ್ತಪಡಿಸುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಳೆಗಾಲ ಆರಂಭವಾಗಿದ್ದು ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಈ ಹಿನ್ನೆಲೆ ಮಲ್ಪೆ ಬೀಚ್ ಗೆ ಪ್ರವಾಸಿಗರು ಇಳಿಯದಂತೆ ಕಡಲ ಕಿನಾರೆಯಲ್ಲಿ ಎಚ್ಚರಿಕೆ ಬೋರ್ಡ್ ಗಳನ್ನು ಅಳವಡಿಸಲಾಗಿದೆ. ಅಲ್ಲದೆ ಒಂದು ಕಿಲೋ ಮೀಟರ್ ಉದ್ದದ ತಡೆ ಬೇಲಿಯನ್ನು ಕೂಡ ಹಾಕಲಾಗಿದೆ. ಆದರೂ ಅದನ್ನು ದಾಟಿ ಕೆಲವು ಪ್ರವಾಸಿಗರು ಸಮುದ್ರಕ್ಕೆ ಇಳಿದಿದ್ದಾರೆ.
ಈ ಸಂದರ್ಭದಲ್ಲಿ ಸ್ಥಳಕ್ಕೆ ಗೃಹ ರಕ್ಷಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ಹಾಗೂ ಸಮುದ್ರಕ್ಕೆ ಇಳಿದಿರುವವರನ್ನು ವಾಪಸ್ ಬರುವಂತೆ ತಿಳಿಸಿದ್ದಾರೆ. ಆದರೂ ಕೇಲದ ಸಂದರ್ಭ ಲಾಠಿ ಬೀಸಿದ್ದಾರೆ ಎನ್ನಲಾಗಿದೆ. ಇದನ್ನು ಕೆಲವು ಪ್ರವಾಸಿಗರು ಆಕ್ಷೇಪಿಸಿದ್ದಾರೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.