ಕಾಸರಗೋಡು, ಜೂ 21 (Daijiworld News/MSP): ರೈಲಿನ ಮೂಲಕ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಮೌಲ್ಯದ ತಂಬಾಕು ಉತ್ಪನ್ನಗಳನ್ನು ಕಾಸರಗೋಡು ರೈಲ್ವೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಉತ್ತರಪ್ರದೇಶದ ಪ್ರಮೋದ್ ಚೌಹಾಣ್ ಎಂಬಾತನನ್ನು ಬಂಧಿಸಲಾಗಿದೆ. ಖಚಿತ ಮಾಹಿತಿಯಂತೆ ರೈಲ್ವೆ ಪೊಲೀಸರು ಮಂಗಳೂರು - ಚೆನ್ನೈ ರೈಲಿನಲ್ಲಿ ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ .
ಸುಮಾರು 11 ಸಾವಿರ ಪ್ಯಾಕೆಟ್ ತಂಬಾಕು ಉತ್ಪನ್ನವನ್ನು ವಶಪಡಿಸಿಕೊಳ್ಳಲಾಗಿದ್ದು , ಈತ ಕುಳಿತಿದ್ದ ಸೀಟಿನಡಿಯಲ್ಲಿ ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿ ಸಾಗಿಸಲಾಗುತ್ತಿತ್ತು.