ಮಂಗಳೂರು, ಜೂ22(Daijiworld News/SS): ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗಿದೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತಾ ಅಮೃತಾನಂದಮಯಿ ಸಂಸ್ಥೆಯ ಸಿಬ್ಬಂದಿಗಳು ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿದರು. ಜೊತೆಗೆ, ಯೋಗದ ಮಹತ್ವದ ಬಗ್ಗೆಯೂ ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ವಿಮಾನ ನಿಲ್ದಾಣದ ನಿರ್ದೇಶಕ ವಿ.ವಿ. ವೆಂಕಟೇಶ್ವರ ರಾವ್, ಸಿಐಎಸ್'ಎಫ್ ಡೆಪ್ಯುಟಿ ಕಮಾಂಡೆಂಟ್ ಅಮಿತ್ ಕುಮಾರ್, ಇಮಿಗ್ರೇಶನ್ ವಿಭಾಗದ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪ್ರಸಾದ್ ಹಾಗೂ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ), ಸಿಐಎಸ್ಎಫ್, ಇಂಡಿಗೋ, ಇಮಿಗ್ರೇಶನ್ ಸಿಬ್ಬಂದಿಗಳು ಸೇರಿದಂತೆ 80 ಕ್ಕೂ ಅಧಿಕ ಮಂದಿ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.