ಮಂಗಳೂರು, ಜೂ 24 (Daijiworld News/SM): ನಗರದಲ್ಲಿ ಡೆಂಗ್ಯು ಜ್ವರ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಜೊತೆಗೆ ಚರ್ಚಿಸಿ ಮಾಹಿತಿ ಪಡೆದಿದ್ದೇನೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆನೀಡಲಾಗಿದೆ ಎಂದರು.
ಇನ್ನು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟವನ್ನು ಸಹಿಸಲು ಸಾಧ್ಯವಿಲ್ಲ. ಅಕ್ರಮ ಗೋ ಸಾಗಾಟ ವಿರುದ್ಧ ಹೋರಾಟ ಅಗತ್ಯವಾಗಿ ನಡೆಯಬೇಕಾಗಿದೆ. ಪ್ರತಿ ಧರ್ಮೀಯರು ಅಕ್ರಮ ಗೋಸಾಗಾಟವನ್ನು ವಿರೋಧಿಸುತ್ತಾರೆ. ಕೇಂದ್ರ ಸರ್ಕಾರ ಗೋಹತ್ಯೆ ನಿಷೇಧಿಸಲಿ ಎಂದು ಸಚಿವ ಖಾದರ್ ಆಗ್ರಹಿಸಿದ್ದಾರೆ.
ಇನ್ನು ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ವಂಚಿತರಾದವರಿಗೆ ನ್ಯಾಯ ಒದಗಿಸಲಾಗುವುದು. ವಂಚನೆ ಪ್ರಕರಣದ ಬಗ್ಗೆ ಎಸ್ ಐಟಿ ಮೂಲಕ ತನಿಖೆ ನಡೆಸಲಾಗುತ್ತಿದೆ. ಹಗರಣದಲ್ಲಿ ಭಾಗಿಯಾದವರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು. ಆರೋಪಿ ಮಾಲೀಕನ ಹೇಳಿಕೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಖಾದರ್ ತಿಳಿಸಿದ್ದಾರೆ.