ಮಂಗಳೂರು, ಜೂ 24 (Daijiworld News/SM): ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯಲ್ಲಿ ಅಕ್ರಮವಾಗಿ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿದ್ದ ಗೋವುಗಳನ್ನು ಬಿಡುಗಡೆಗೊಳಿಸಿ ಕೊಂಡೊಯ್ದ ಸಂದರ್ಭ ಪಾಟಾಕಿ ಸಿಡಿಸಿ ಸಂಭ್ರಮಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಹನೀಫ್ ಹಾಗೂ ಒರಿಸ್ಸಾದ ತೈಜುಲಿಸ್ಲೀಮ್ ಎಂಡು ಗುರುತಿಸಲಾಗಿದೆ.
ಆರೋಪಿಗಳು ಅಕ್ರಮವಾಗಿ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿದ್ದ ಗೋವುಗಳನ್ನು ಬಿಡುಗಡೆಗೊಳಿಸಿ ಕೊಂಡೊಯ್ಯುವ ವೇಳೆ ಪಾಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಆದರೆ, ಇದನ್ನು ಕೆಲವು ಹಿಂದೂ ಪರ ಸಂಘಟನೆಗಳು ವಿರೋಧಿಸಿದ್ದವು. ಹಾಗೂ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದರು.
ಸಂಘಟನೆಗಳು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಆರೋಪಿಗಳನ್ನು ಶೀಘ್ರ ಬಂಧಿಸುವುದಾಗಿ ಮಂಗಳೂರು ಕಮೀಷನರ್ ಸಂದೀಪ್ ಪಾಟೀಲ್ ತಿಳಿಸಿದ್ದರು. ಅದರಂತೆ ಕಾರ್ಯಾಚರಣೆ ನಡೆಸಲಾಗಿದೆ. ಉಳಿದ ಆರೋಪಿಗಳ ಬಂಧನಕ್ಕೂ ಬಲೆ ಬೀಸಿದ್ದು, ಕಾರ್ಯಾಚರಣೆ ಮುಂದುವರೆಸಲಾಗಿದೆ.