ಮಂಗಳೂರು, ಜೂ 26 (Daijiworld News/MSP): ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ದುಬೈನಿಂದ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿರುವುದನ್ನು ಪತ್ತೆ ಹಚ್ಚಿ ಆತನಿಂದ ಕಸ್ಟಮ್ಸ್ ಅಧಿಕಾರಿಗಳು 12.06 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
24 ಕ್ಯಾರೆಟ್ ಶುದ್ದತೆಯ 349.48 ಗ್ರಾಂ ಚಿನ್ನವನ್ನು ಪ್ರಯಾಣಿಕನಿಂದ ವಶಕ್ಕೆ ಪಡೆಯಲಾಗಿದೆ. ಟೈಗರ್ ಬಾಮ್ , ಟಾಲ್ಕಮ್ ಪೌಡರ್ ತಳಭಾಗದಲ್ಲಿ ಚಿನ್ನವನ್ನು ದ್ರವ ರೂಪದಲ್ಲಿ ಲೇಪಿಸಿ ಸಾಗಾಟಕ್ಕೆ ಯತ್ನಿಸಿದ್ದ. ಸೊತ್ತು ಸಹಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.