ಕುಂದಾಪುರ, ಜೂ 27 (Daijiworld News/SM): ಪಾದಚಾರಿಗಳಿಗೆ ಮಾರುತಿ ಈಕೊ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಸಾಲಿಗ್ರಾಮ ಹೆದ್ದಾರಿ 66ರಲ್ಲಿ ನಡೆದಿದೆ. ಸಾಲಿಗ್ರಾಮದ ಕರ್ಕಡ ನಿವಾಸಿಗಳಾದ ಚಂದ್ರ (46) ಎಂಬವರು ಮೃತ ವ್ಯಕ್ತಿ. ನಾರಾಯಣ(50) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಜೀವ ಉಳಿಸಲಾಗಲಿಲ್ಲ.
ಹೆದ್ದಾರಿ ಸಮೀಪದಲ್ಲಿ ನಡೆದುಕೊಂಡು ಸಹೋದರರಾದ ಚಂದ್ರ ಹಾಗೂ ನಾರಾಯಣ ನಡೆದುಕೊಂಡು ತೆರಳುತ್ತಿದ್ದರು. ಈ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡು ಮುನ್ನುಗ್ಗಿದ ಕಾರು ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ನಾರಾಯಣ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸಾಲಿಗ್ರಾಮದಲ್ಲಿ ಸರ್ವೀಸ್ ರಸ್ತೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಘಟನೆಯ ಕುರಿತಂತೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.