ಮಂಗಳೂರು, ಜೂ 30 (Daijiworld News/SM): ದುಬೈನಿಂದ ಬಂದ ವಿಮಾನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕಿಡ್ ಆಗಿರುವ ಪ್ರಕರಣವನ್ನು ಉನ್ನತ ತನಿಖೆಗೆ ವಹಿಸುವಂತೆ ನಗರಾಭಿವೃದ್ಧಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು ಆಗ್ರಹಿಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರನ್ ವೇಯಿಂದ ಜಾರಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಈ ಸಂಬಂಧ ನಾಗರೀಕ ವಿಮಾನಯಾನ ಮಹಾ ನಿರ್ದೇಶಕರೊಂದಿಗೆ ಹಾಗೂ ಸಚಿವಾಲಯದೊಂದಿಗೆ ಮಾತನಾಡಿರುವ ಸಚಿವರು, ಈ ಘಟನೆ ಪೈಲಟ್ ಅಥವಾ ವಿಮಾನದ ದೋಷದಿಂದ ಏರ್ ಪೋಟ್೯ ವ್ಯವಸ್ಥೆಯಲ್ಲಿ ಏನಾದರೂ ಕೊರತೆಯುಂಟಾಗಿದೆಯೇ ಎಂಬುದರ ಬಗ್ಗೆ ಸಮಗ್ರ ವಿಚಾರಣೆ ನಡೆಸಬೇಕು.
ಪ್ರಯಾಣಿಕರ ಸುರಕ್ಷಿತ ಪ್ರಯಾಣಕ್ಕೆ ಉತ್ಕೃಷ್ಟ ಕಾಳಜಿ ವಹಿಸಬೇಕು. ಕೂಡಲೇ ಈ ಬಗ್ಗೆ ಸ್ಪಂದಿಸಲು ಸಚಿವ ಖಾದರ್ ಆಗ್ರಹಿಸಿದ್ದಾರೆ.