ಮಂಗಳೂರು, ಜು02(Daijiworld News/SS): ಕಂಕನಾಡಿ ನಗರ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಮಂಗಳೂರಿನ ಕಣ್ಣೂರು ಎಂಬಲ್ಲಿ ಜಾನುವಾರುಗಳನ್ನು ಮನೆಯಲ್ಲಿ ಕೂಡಿಟ್ಟು, ಕಸಾಯಿಖಾನೆಯಲ್ಲಿ ಅಕ್ರಮವಾಗಿ ವಧೆ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದಾರೆ ಎಂಬುದಾಗಿ ಸಿ.ಸಿ.ಬಿ. ಘಟಕದವರು ನೀಡಿದ ಖಚಿತ ಮಾಹಿತಿಯ ಮೇರೆಗೆ ಜು.01ರಂದು ಮಧ್ಯಾಹ್ನ ಕಂಕನಾಡಿ ನಗರ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.
ಈ ವೇಳೆ ಸ್ಥಳದಲ್ಲಿದ್ದ ಮೂರು ಜಾನುವಾರುಗಳ ಚರ್ಮ, ದನದ ಮಾಂಸ ಮತ್ತು ತ್ಯಾಜ್ಯ ವಸ್ತುಗಳು ಮತ್ತು ಇತರ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ.