ಮಂಗಳೂರು, ಜು 03 (Daijiworld News/MSP): ಓರ್ವ ಹುಡುಗಿ ಜೊತೆ 3 ರಿಂದ 4 ಮಂದಿ ಹುಡುಗರು ಆತ್ಮೀಯ ಕೃತ್ಯದಲ್ಲಿ ತೊಡಗಿರುವ ವೀಡಿಯೊ ಒಂದು ವಾಟ್ಸಾಪ್ ಮೂಲಕ ಪ್ರಸಾರ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಡಿಯೋ ಪ್ರಸಾರ ಮತ್ತು ಪಾರ್ವಡ್ ಮಾಡುವ ಕಿಡಿಗೇಡಿಗಳ ವಿರುದ್ಧ ಸು-ಮೋಟು ಪ್ರಕರಣವನ್ನು ಕೈಗೆತ್ತಿಕೊಳ್ಳುತ್ತೇವೆ ಎಂದು ದ.ಕ. ಜಿಲ್ಲಾ ಎಸ್ಪಿ, ಬಿ.ಎಂ.ಲಕ್ಷ್ಮಿಪ್ರಸಾದ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ನಿಟ್ಟಿನಲ್ಲಿ ಉಲ್ಲೇಖಿತ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಬಾರದು ಅಥವಾ ಉಲ್ಲೇಖಿತ ವೀಡಿಯೊಗಳನ್ನು ಅವರ ಪೋನ್ ಕಂಪ್ಯೂಟರ್ ಗಳಲ್ಲಿ ಉಳಿಸಬಾರದು ಎಂದು ನಾವು ಸಾರ್ವಜನಿಕರ ಬಳಿ ವಿನಂತಿ ಮಾಡುತ್ತೇವೆ. ಈ ರೀತಿಯ ಕೆಲಸ ಮಾಡುವುದು ಐಪಿಸಿ ಸೆಕ್ಷನ್ 354 ಸಿ ಮತ್ತು 66 ಇ, ಐಟಿ ಕಾಯ್ದೆಯ 66 ಎ ಅಡಿಯಲ್ಲಿ ಅಪರಾಧವಾಗಿದೆ. ಒಂದು ವೇಳೆ ವಿಡಿಯೋ ಪ್ರಸಾರ ಮಾಡಿದರೆ ಅವರನ್ನು ಆರೋಪಿಯನ್ನಾಗಿ ಮಾಡಿ ಪ್ರಕರಣ ದಾಖಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.