ಪುತ್ತೂರು, ಜು 03 (Daijiworld News/MSP): ಸಹಪಾಠಿ ವಿದ್ಯಾರ್ಥಿನಿಗೆ ಮಾದಕ ವಸ್ತು ತಿನ್ನಿಸಿ ಆಕೆ ಪ್ರಜ್ಞಾಹೀನಾ ಸ್ಥಿತಿ ತಲುಪಿದ ಬಳಿಕ ಆಕೆಯ ಸಹಪಾಠಿ ವಿದ್ಯಾರ್ಥಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ವಿದ್ಯಾರ್ಥಿಗಳನ್ನು ಪುತ್ತೂರಿನ ಖಾಸಗಿ ಕಾಲೇಜು ಡಿಬಾರ್ ಮಾಡಿದೆ.
ಪ್ರಕರಣ ಹೊರಬರುತ್ತಿದ್ದಂತೆ, ಕಾಲೇಜಿನ ಆಡಳಿತ ಮಂಡಳಿಯ ಸಭೆ ನಡೆಸಿ ಪ್ರಕರಣದಲ್ಲಿ ಭಾಗಿಯಾದ ವಿದ್ಯಾರ್ಥಿಗಳನ್ನು ಡಿಬಾರ್ ಬಗ್ಗೆ ತೀರ್ಮಾನಿಸಲಾಗಿದ್ದು , ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಾದ ಪ್ರಜ್ವಲ್, ಪ್ರಖ್ಯಾತ್, ಕಿಶನ್ ಆಚಾರ್ಯ, ಗುರುನಂದನ್ ಮತ್ತು ಸುನೀಲ್ ಎಂಬವರನ್ನು ಡಿಬಾರ್ ಮಾಡಿ ಕಾಲೇಜಿನ ಪ್ರಾಂಶುಪಾಲರು ಆದೇಶ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸುಮೋಟೋ ಪ್ರಕರಣ ದಾಖಲಿಸಿ ದಕ್ಷಿಣ ಕನ್ನಡದ ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ತನಿಖೆಗೆ ಆದೇಶ ನೀಡಿದ್ದು ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉಳಿದ ಮೂವರಿಗಾಗಿ ಶೋಧ ಮುಂದುವರಿಸಿದ್ದಾರೆ.