ಮಂಗಳೂರು, ಜು 02(Daijiworld News/SM):ಕರ್ತವ್ಯಲೋಪ ಎಸಗಿದ ಆರೋಪ ಎದುರಿಸುತ್ತಿದ್ದ ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಪ್ರವೀಣ್ ಕುಮಾರ್ ಅಮಾನತುಗೊಂಡ ಅಧಿಕಾರಿ.
ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಯೂ ಆಗಿದ್ದ ಅವರ ಕಾರ್ಯನಿರ್ವಹಣೆ ಬಗ್ಗೆ ತೀವ್ರ ಅಸಮಾಧಾನ ಕೇಳಿಬಂದಿತ್ತು. ಈ ಹಿನ್ನೆಲೆ ಜಿಲ್ಲಾಧಿಕಾರಿಗಳು ಕೂಡ ಗಮನಿಸಿದ್ದರು. ನಿರಂತರ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಡಾ. ಪ್ರವೀಣ್ ಅವರನ್ನು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಅಮಾನತುಗೊಳಿಸಿ ಆದೇಶ ನೀಡಲಾಗಿದೆ.
ಇನ್ನು ಅಧಿಕಾರಿಯನ್ನು ಕಳೆದ ವಾರವೇ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿತ್ತು. ಆದರೆ ಇದಕ್ಕೆ ಕೆಎಟಿಯಿಂದ ತಡೆಯಾಜ್ಞೆ ತರಲಾಗಿತ್ತು. ಇದೀಗ ಇಲಾಖೆ ಡಾ. ಪ್ರವೀಣ್ ಕುಮಾರ್ ಅವರನ್ನು ಸೇವೆಯಿಂದಲೇ ಅಮಾನತುಗೊಳಿಸಿ ಆರೋಗ್ಯ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.