ಮಂಗಳೂರು, ಜು 09 (Daijiworld News/MSP): ನಂತೂರಿನಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದ ಲಾರಿಯೊಂದು ಎಕ್ಸೆಲ್ ತುಂಡಾದ ಪರಿಣಾಮವಾಗಿ ನಿಯಂತ್ರಣ ತಪ್ಪಿ ಎದುರಿದ್ದ ಕಾರಿಗೆ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದ ಘಟನೆ ಜು.9 ರ ಮಂಗಳವಾರ ನಡೆದಿದೆ.
ನಿಯಂತ್ರಣ ತಪ್ಪಿದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಮುಂದಿದ್ದ ಮೂರು ಕಾರು ಒಂದಕ್ಕೊಂದು ಢಿಕ್ಕಿಯಾಗಿದೆ. ಘಟನೆಯ ಕ್ರೇಟಾ , ಹಾಗೂ ಟ್ರಾವೆರಾ ಕಾರಿಗೆ ಹೆಚ್ಚಿನ ಅನಾಹುತ ಸಂಭವಿಸಿದ್ದು ಕಾರಿನ ಹಿಂಭಾಗ ಮತ್ತು ಮುಂಭಾಗ ಸಂಪೂರ್ಣ ಜಖಂ ಆಗಿದೆ.ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.
ಅಪಘಾತದ ಪರಿಣಾಮ ಮೂವರಿಗೆ ಗಾಯಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಘಟನೆಯ ಕುರಿತು ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.