ಬಂಟ್ವಾಳ, ಜು 09 (DaijiworldNews/SM): ಜುಗಾರಿ ಆಟವಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ಆಟದಲ್ಲಿ ನಿರತರಾಗಿದ್ದ 5 ಮಂದಿಯನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.
ವಸಂತ, ಶೀನ, ಯಶೋಧರ, ಶೇಖರ ಪೂಜಾರಿ, ಕೇಶವ ಪೂಜಾರಿ ಎಂಬ 5 ಜನರನ್ನು ವಶಕ್ಕೆ ಪಡೆಯಲಾಗಿದೆ. ಹಾಗೂ ಆಟಕ್ಕೆ ಉಪಯೋಗಿಸಿದ ನಗದು ವಶಪಡಿಸಿಕೊಳ್ಳಲಾಗಿದೆ.
ಜುಲೈ 9ರ ಮಂಗಳವಾರದಂದು ಸಂಜೆ ಸುಮಾರು 5.00 ಗಂಟೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ನಾವೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಹಿಂಭಾಗದಲ್ಲಿ ಹಣವನ್ನು ಪಣಕ್ಕೆ ಇಟ್ಟು ಜುಗಾರಿ ಆಡುತ್ತಿದ್ದರು. ಅಡ್ಡೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.