ಮಂಗಳೂರು, ಜು10(Daijiworld News/SS): ನಗರದ ಆಕಾಶಭವನ ಸಮೀಪ ಲಘು ಭೂಕುಸಿತ ಸಂಭವಿಸಿದ್ದು, ತಡೆಗೋಡೆ ಕುಸಿದು ಬಿದ್ದಿದೆ. ಭಾರೀ ಮಳೆ ಸುರಿಯುತ್ತಿರುದರಿಂದ ಭೂ ಕುಸಿತ ಉಂಟಾಗಿದ್ದು, ಮನೆಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಅವ್ಯಾಹತ ಭಾರಿ ಮಳೆಯ ಪರಿಣಾಮ ಈ ಘಟನೆ ಸಂಭವಿಸಿದೆ. ಭೂ ಕುಸಿತ ಉಂಟಾಗಿರುವ ಪ್ರದೇಶದಲ್ಲಿ ಮಂಗಳೂರು ಮಹಾ ನಗರ ಪಾಲಿಕೆಯಿಂದ ತುರ್ತಾಗಿ ಮಣ್ಣು ತೆಗೆಯುವ ಕಾರ್ಯ ನಡೆಯುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕರಾವಳಿಯಲ್ಲಿ ದುರ್ಬಲವಾಗಿದ್ದ ಮುಂಗಾರು ಚುರುಕುಗೊಂಡಿದೆ. ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಉತ್ತಮ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲೂ ಮುಂಗಾರು ಮಳೆ ಅಬ್ಬರ ಪಡೆದಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ.