ಮಂಗಳೂರು, ಜು 13 (Daijiworld News/MSP): ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಲಾರಿ ಸಹಿತ ಮರಳನ್ನು ಕಂಕನಾಡಿ ಪೊಲೀಸರು ಜು.12 ರ ಗುರುವಾರ ವಶಕ್ಕೆ ಪಡೆದ್ದಾರೆ.
ಪಡೀಲು ಜಂಕ್ಷನ್ ಬಳಿ ಸಾಗುತ್ತಿದ್ದ KA-46-3202 ಲಾರಿಯನ್ನು ಪರಿಶೀಲಿಸಿದಾಗ ಯಾವುದೇ ಪರವಾನಿಗೆ ಇಲ್ಲದೇ, ಲಾರಿಯುಲ್ಲಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿರುವುದು ಕಂಡುಬಂದ ಹಿನ್ನಲೆಯಲ್ಲಿ ವಾಹನ ಮತ್ತು ಮರಳನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂದಿನ ಕ್ರಮಕ್ಕಾಗಿ ಸ್ವಾಧೀನಪಡಿಸಿಕೊಂಡ ಲಾರಿ ಹಾಗೂ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ ರೂಪಾಯಿ ಹತ್ತು ಲಕ್ಷ ರೂಪಾಯಿಗಳು ಆಗಿದೆ.
ಈ ಪತ್ತೆ ಕಾರ್ಯಾಚರಣೆಯಲ್ಲಿ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ರಾಮರಾವ್ ರವರ ಮಾರ್ಗದರ್ಶನದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಅಶೋಕ ಪಿ ರವರ ನೇತ್ರತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ಪ್ರದೀಪ್ ಟಿ.ಆರ್ ಮತ್ತು ಠಾಣಾ ಸಿಬ್ಬಂದಿಯವರು ನಡೆಸಿರುತ್ತಾರೆ.