ಉಳ್ಳಾಲ ಡಿ 13 : ಕುತ್ತಾರು ಬಾಲ ಸಂರಕ್ಷಣಾ ಕೇಂದ್ರದ ಜಾನುವಾರು ಕಳವುಗೈದ ಆರೋಪಿಗಳನು ಸಿಸಿಬಿ ಪೊಲೀಸರು ಡಿ 12 ರ ಮಂಗಳವಾರ ಬಂಧಿಸಿದ್ದಾರೆ. ಕಳವಿಗೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಕಸಬ ಬೆಂಗ್ರೆ ನಿವಾಸಿ ಅಹಮ್ಮದ್ ಕಬೀರ್( 29 ) ಬಂಟ್ವಾಳ ತಾಲೂಕು , ಅಮ್ಮೆಮಾರ್ ನ ಸಾಹುಲ್ ಹಮೀದ್ (28) ಎಂದು ಗುರುತಿಸಲಾಗಿದೆ. ಆಗಸ್ಟ್ 9 ರ ನಸುಕಿನ ಜಾವ ಬಾಲಸಂರಕ್ಷಣ ಕೇಂದ್ರದಲ್ಲಿ ಸಾಕುತ್ತಿದ್ದ ಒಂದು ದನವನ್ನು ಹಟ್ಟಿಯಿಂದ ಕಳವು ನಡೆಸಿದ್ದರು ಆರೋಪಿಗಳನ್ನು ಕೂಳೂರು ರಿಲಯೆನ್ಸ್ ಬಳಿ ಬಂಧಿಸಿ ಕೃತ್ಯಕ್ಕೆ ಬಳಸುತ್ತಿದ್ದ ಸ್ವಿಪ್ಟ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಪೈಕಿ ಅಹಮ್ಮದ್ ಕಬೀರ್ ವಿರುದ್ಧ ಈ ಹಿಂದೆ ಪಣಂಬೂರು, ಬಜಪೆ, ಕಾರ್ಕಳ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಟ್ಟು 7 ದನ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಶಾಹುಲ್ ಹಮೀದ್ ಎಂಬಾತನ ವಿರುದ್ಧ ಕಡಬ,ಉಪ್ಪಿನಂಗಡಿ,ಪಣಂಬೂರು, ಬಜಪೆ ಮತ್ತು ಕಾರ್ಕಳ ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನಕ್ಕೆ ಸಂಬಂಧಪಟ್ಟಂತೆ 8 ಪ್ರಕರಣಗಳು ದಾಖಲಾಗಿದೆ. ಬಂಧಿತರಿಂದ ಕರು ಸಹಿತ ಒಟ್ಟು 5.6 ಲಕ್ಷ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.
ಪೊಲೀಸ್ ಕಮೀಷನರ್ ಟಿ. ಆರ್ ಸುರೇಶ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಹನುಮಂತರಾಯ ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಯವರಾದ ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯಲ್ಲಿ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.