ಮಂಗಳೂರು ಡಿ 13 : ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೃಷಿ ಸಹಾಯಕ ನಿರ್ದೇಶಕ ಪಿ.ಎಫ್ ಮಿರಾಂಡ ಅವರ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಡಿ 13 ರ ಬುಧವಾರ ದಾಳಿ ನಡೆಸಿದ್ದಾರೆ. ಎಸಿಬಿ ಡಿವೈಎಸ್ಪಿ ಸುಧೀರ್ ಹೆಗ್ಡೆ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮಿರಾಂಡ ಅವರ ಬಂಟ್ವಾಳದ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಇನ್ನು ತೋಕೂರಿನ ಪಕ್ಷಿಕೆರೆಯಲ್ಲಿರುವ ಮಿರಾಂಡ ಅವರ ನಿವಾಸದ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ . ಕೃಷಿ ಸಹಾಯಕ ನಿರ್ದೇಶಕ ಪಿ.ಎಫ್ ಮಿರಾಂಡ ಇನ್ನು ಮೂರು ತಿಂಗಳ ಒಳಗಾಗಿ ಸೇವೆಯಿಂದ ನಿವೃತ್ತಿಯಾಗಲಿದ್ದರೆ.
ಕೃಷಿಕರೊಬ್ಬರ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದ್ದು , ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.