ಬಂಟ್ವಾಳ, ಜು 16 (DaijiworldNews/SM): ತಾಲೂಕಿನ ಕರೋಪಾಡಿ ಗ್ರಾಮದ ಪಾದೆಕಲ್ಲು ಎಂಬಲ್ಲಿ ಕಾನೂನು ಉಲ್ಲಂಘಿಸಿ ನಡೆಸಲಾಗುತ್ತಿದ್ದ ಕೆಂಪುಕಲ್ಲಿನ ಮೂರು ಕೋರೆಗಳಿಗೆ ಏಕಕಾಲದಲ್ಲಿ ದಾಳಿ ನಡೆದಿರುವ ಘಟನೆ ಜುಲೈ 16ರ ಮಂಗಳವಾರ ನಡೆದಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಾದ ಪದ್ಮಶ್ರೀ ಹಾಗೂ ಬಂಟ್ವಾಳ ತಹಶೀಲ್ದಾರರಾದ ರಶ್ಮಿ ಎಸ್ ಆರ್ ಇವರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಸ್ವತ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಕ್ರೇನ್ ಬಳಸಿ ಸ್ಥಳದಲ್ಲಿದ್ದ ಸ್ವತ್ತುಗಳನ್ನು ವಶ ಪಡಿಸಿಕೊಂಡು ಗಣಿ ಹಾಗೂ ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಒಂದು ಲಾರಿ ಕಲ್ಲು, ಕಡಿಯಲು ಉಪಯೋಗಿಸುವ ದೊಡ್ಡ ಗಾತ್ರದ ಯಂತ್ರ ಸೇರಿದಂತೆ ಹಲವು ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.