ವಿಟ್ಲ, ಜು 16 (DaijiworldNews/SM): ರೋಗಿಯನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಣಿಯ ಪರ್ಲೋಟ್ಟು ಎಂಬಲ್ಲಿ ಜುಲೈ 16ರ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಮೂವರು ಗಾಯಗೊಂಡಿದ್ದಾರೆ. ಪುತ್ತೂರಿನಿಂದ ಮಂಗಳೂರಿಗೆ ರೋಗಿಯನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಗೆ ಪುತ್ತೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪುತ್ತೂರು ಮಹಾವೀರ ಆಸ್ಪತ್ರೆಗೆ ಸೇರಿದ ಆಂಬ್ಯುಲೆನ್ಸ್ ಗೆ ಇದಾಗಿದ್ದು, ತುರ್ತು ಚಿಕಿತ್ಸೆ ಹಿನ್ನೆಲೆ ರೋಗಿಯನ್ನು ಇದರ ಮೂಲಕ ಮಂಗಳೂರಿಗೆ ಕರೆತರಲಾಗುತ್ತಿತ್ತು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.