ವಿಟ್ಲ, ಜು 17 (Daijiworld News/RD): ವಿಟ್ಲ ಸಮೀಪದ ಮಾಣಿಯ ಪರ್ಲೋಟ್ಟು ಎಂಬಲ್ಲಿ ಮಂಗಳವಾರ ರಾತ್ರಿ ರೋಗಿಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ಗೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದು ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಬುಧವಾರ ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯನ್ನು ಸೇಸಮ್ಮ ಎಂದು ಗುರುತಿಸಲಾಗಿದೆ. ಅಪಘಾತದಿಂದಾಗಿ ಪಾರ್ವತಿ ಎಂಬವರು ಮಂಗಳವಾರ ಸ್ಥಳದಲ್ಲಿ ಸಾವನ್ನಪ್ಪಿದ್ದರು, ಈ ವೇಳೆ ಗಂಭೀರ ಗಾಯಗೊಂಡಿದ್ದ ಸೇಸಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ.
ರೋಗಿಯೊಬ್ಬರ ಡಯಾಲಿಸಿಸ್ ಮಾಡಲು ಪುತ್ತೂರಿನ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆ ಕೊಂಡೊಯ್ಯುತ್ತಿದ್ದ ವೇಳೆ ಪುತ್ತೂರಿನ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಆಂಬ್ಯುಲೆನ್ಸ್ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿತ್ತು.