ಮಂಗಳೂರು, ಜು 19(Daijiworld News/MSP): ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ, ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸೂಚನೆಯಿದ್ದು, ದಿನಾಂಕ 20-07-2019 ರಿಂದ 22-07-2019 ಪರೆಗೆ ಪ್ರತಿದಿನ ತಲಾ 200/771 ಮೇಲ್ಪಟ್ಟು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜು 20 ರ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿದ್ದಾರೆ.
ರೆಡ್ ಆಲರ್ಟ್ ಘೋಷಣೆ ಆಗಿರುವ ಹಿನ್ನಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ತುರ್ತು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.
ಅಲ್ಲದೆ ದ.ಕ ಜಿಲ್ಲೆಯ ಸರಕಾರಿ, ಅನುದಾನಿತ ಮತ್ತು ಖಾಸಗಿಯ ಪದವಿ ಪೂರ್ವ ಎಲ್ಲಾ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸುವಂತೆ ಆದೇಶಿಸಿದ್ದಾರೆ. ಇದಲ್ಲದೆ ಮೀನುಗಾರರಿಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ, ಪ್ರವಾಸಿಗರು ಎಚ್ಚರ ವಹಿಸುವಂತೆ ಹಾಗೂ ನೀರಿರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.