ಮಂಗಳೂರು, ಜು20 (Daijiworld News/RD): ರೈಲು ಹಳಿಗಳ ಬಳಿ ಇರುವ ಅಪಾಯಕಾರಿ ಬಂಡೆಯನ್ನು ತೆರವುಗೊಳಿಸುವ ನಿಮಿತ್ತ ಮಂಗಳೂರು – ಬೆಂಗಳೂರು ನಡುವಿನ ರೈಲು ಓಡಾಟವನ್ನು ಜು 20 ಮತ್ತು 21 ಶನಿವಾರ ಮತ್ತು ರವಿವಾರ ಸ್ಥಗಿತಗೊಳಿಸಲಾಗಿದೆ
ಶಿರಾಡಿ ಘಾಟ್ ರೈಲು ಮಾರ್ಗದ ಸಿರಿಬಾಗಿಲು ಸಮೀಪದ ಮಣಿಭಂಡ ಬಳಿ ಅಪಾಯಕಾರಿ ಬಂಡೆಗಳು ರೈಲು ಸಂಚಾರಕ್ಕೆ ಅಡಚಣೆಯಾಗುವ ಹಿನ್ನೆಲೆಯಲ್ಲಿ ಅವುಗಳನ್ನು ತೆರವುಗೊಳಿಸಿ ಮುಕ್ತ ಸಂಚಾರ ಮಾಡುವ ಸಲುವಾಗಿ ಎರಡು ದಿನ ರೈಲು ಸಂಚಾರ ಸ್ಥಗಿತಗೊಳಿಸಲು ಇಲಾಖೆ ನಿರ್ಧರಿಸಿದೆ.
ಈ ತಿಂಗಳ ಜು.9 ರಂದು ಭಾರಿ ಮಳೆಯಿಂದಾಗಿ ಪಶ್ಚಿಮ ಘಟ್ಟದ ಸಕಲೇಶಪುರ- ಸುಬ್ರಹ್ಮಣ್ಯ ವಲಯದಲ್ಲಿ ಭೂಕುಸಿತದಿಂದ ಸ್ಥಗಿತಗೊಂಡಿದ್ದು, ಹಳಿಗಳ ಮೇಲೆ ಬಿದ್ದಿದ್ದ ಕಲ್ಲು ಮಣ್ಣುಗಳನ್ನು ತೆರವುಗೊಳಿಸಿದ ರೈಲ್ವೆ ಇಲಾಖೆ ಯಾವುದೇ ಅಡಚಣೆಯಿಲ್ಲದೆ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿತು. ಆದರೆ ಇದೀಗ ಭಾರಿ ಗಾತ್ರದ ಬಂಡೆಗಳು, ಗುಡ್ಡಗಳು ಕುಸಿದು ಸಂಚಾರ ಮತ್ತೆ ಸ್ಥಗಿತಗೊಂಡಿದೆ.