ಮಂಗಳೂರು, ಜು24(Daijiworld News/SS): ನಗರದ ಬಂದರು ಪ್ರದೇಶದ ಅಭಿವೃದ್ಧಿಗೆ ರಾಜ್ಯ ಮೀನುಗಾರಿಕಾ ಇಲಾಖೆ 50 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಅನೇಕ ಅವ್ಯವಸ್ಥೆ ಇತ್ತು. ಈ ಹಿನ್ನಲೆಯಲ್ಲಿ, ಜೂ.19ರಂದು ಬಂದರು ಪ್ರದೇಶಕ್ಕೆ ಶಾಸಕರು ಭೇಟಿ ನೀಡಿ ಅವ್ಯವಸ್ಥೆಯನ್ನು ಪರಿಶೀಲಿಸಿದ್ದರು. ಬಳಿಕ ಮೀನುಗಾರಿಕೆ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದರು. ಇದರಿಂದ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನ ಹಳೆ ದಕ್ಕೆ ದುರಸ್ತಿ, ಹರಾಜು ಪ್ರಾಂಗಣ ದುರಸ್ತಿ, ವಾರ್ಫ್ನ ಕಾಂಕ್ರಿಟ್ ಕೆಲಸಗಳಿಗೆ ಬಳಕೆಯಾಗಲಿದೆ ಎಂದು ಹೇಳಿದ್ದಾರೆ.
ಬಂದರು ಪ್ರದೇಶದ ಅಭಿವೃದ್ಧಿಗೆ ರಾಜ್ಯ ಮೀನುಗಾರಿಕಾ ಇಲಾಖೆ 50 ಲಕ್ಷ ರೂ. ಅನುದಾನ ಮಂಜೂರು ಮಾಡಿರುವುದರಿಂದ ಸ್ಥಳೀಯ ಮೀನುಗಾರರು ಖುಷಿಗೊಂಡಿದ್ದಾರೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.